2024 ರ ಕ್ವಾಡ್ ಶೃಂಗಸಭೆಗೆ ಭಾರತ ಆತಿಥ್ಯ: ಹಿರೋಶಿಮಾದಲ್ಲಿ ಪ್ರಧಾನಿ ಮೋದಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2024 ರಲ್ಲಿ ಕ್ವಾಡ್ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಹಿರೋಶಿಮಾದಲ್ಲಿ ಜಿ7 ಶೃಂಗಸಭೆಯ ನಡುವೆ ನಡೆಯುತ್ತಿರುವ ಕ್ವಾಡ್ ಶೃಂಗಸಭೆ 2023 ರಲ್ಲಿ ಘೋಷಣೆ ಮಾಡಿದ್ದಾರೆ.

2024 ರಲ್ಲಿ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಲು ಭಾರತ ಸಂತೋಷಪಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬಿಡೆನ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಘೋಷಣೆ ಮಾಡಿದರು.

ಜಾಗತಿಕ ಒಳಿತಿಗಾಗಿ, ಜನರ ಕಲ್ಯಾಣ, ಸಮೃದ್ಧಿ ಮತ್ತು ಶಾಂತಿಗಾಗಿ ಕ್ವಾಡ್ ಪ್ರಯತ್ನಗಳನ್ನು ಮುಂದುವರೆಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!