ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬುಧಾಬಿಯ ಎಮಿರೇಟ್‌ನಲ್ಲಿನ ಮೂರು ಪೆಟ್ರೋಲಿಯಂ ಟ್ಯಾಂಕರ್ ಗಳ ಸ್ಫೋಟದಿಂದ ಇಬ್ಬರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಯಾವುದೇ ರೀತಿಯ ಅಗತ್ಯ ನೆರವು ನೀಡುವುದಾಗಿ ಭಾರತ ಹೇಳಿದೆ.
ಯೆಮೆನ್‌ನಲ್ಲಿ ಹೌತಿ ಬಂಡುಕೋರರು ಸೋಮವಾರ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯರು ಮತ್ತು ಪಾಕಿಸ್ತಾನಿ ಪ್ರಜೆಗಳು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದರು. ಈ ಕೃತ್ಯ ಡ್ರೋನ್ ದಾಳಿ ಮೂಲಕ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯುಎಇಯಲ್ಲಿನ ಭಾರತದ ರಾಯಭಾರಿ ಸಂಜಯ್ ಸುಧೀರ್, ಮೃತ ಭಾರತೀಯ ನಾಗರಿಕರ ಕುಟುಂಬಗಳಿಗೆ ಭಾರತ ಸರ್ಕಾರ ಸಹಾಯ ನೀಡುತ್ತದೆ ಎಂದು ಹೇಳಿದರು.
ಆದರೆ ಈವರೆಗೆ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯರ ಹೆಸರನ್ನು ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿಲ್ಲ.