ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ಕೊಲಂಬೊದಲ್ಲಿ ನಡೆದ ಏಷ್ಯಾಕಪ್ ಸೂಪರ್ ೪ ಹೈವೋಲ್ಟೇಜ್ ಪಂದ್ಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಕುಲ್ದೀಪ್ ಯಾದವ್ ಐದು ವಿಕೆಟ್ ಪಡೆದರೆ ಕೆ.ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅಜೇಯ ಶತಕ ಬಾರಿಸಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್, ಎರಡೂ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ.
ವಾಸ್ತವವಾಗಿ ಭಾನುವಾರ ಭಾರತ ಹಾಗೂ ಪಾಕಿಸ್ತಾನ ಮ್ಯಾಚ್ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಮೀಸಲು ದಿನ ಅಂದರೆ ಸೋಮವಾರಕ್ಕೆ ಪಂದ್ಯವನ್ನು ಮುಂದೂಡಲಾಗಿತ್ತು. ಸೋಮವಾರವೂ ಮಳೆ ಅಡ್ಡಿಯಾಗಿತ್ತಾದರೂ ಪಂದ್ಯ ಮುಗಿಯಿತು.
ಭಾರತವು ಪಾಕಿಸ್ತಾನವನ್ನು ಬರೋಬ್ಬರಿ 228 ರನ್‌ಗಳಿಂದ ಸೋಲಿಸಿ ದಾಖಲೆ ಬರೆದಿದ್ದು, ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಲಿಸ್ಟ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.
ಈ ಪಂದ್ಯಕ್ಕೆ ಮುನ್ನ ಪಾಕಿಸ್ತಾನ ಬಾಂಗ್ಲಾ ಜೊತೆಗಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕದೊಂದಿಗೆ ಅಗ್ರಸ್ಥಾನದಲ್ಲಿತ್ತು. ಆಗ ಟೀಂ ಇಂಡಿಯಾ ಮೂರನೇ ಸ್ಥಾನದಲ್ಲಿತ್ತು. ಆದರೆ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಭಾರತ ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದ್ದು, ಬಾಬರ್ ಪಡೆ ಮೂರನೇ ಸ್ಥಾನಕ್ಕೆ ಜಾರಿದೆ.