ಇಂದಿನಿಂದ ಭಾರತ v/s ಬಾಂಗ್ಲಾ ಟೆಸ್ಟ್‌ ಸರಣಿ ಶುರು, ಹೇಗಿದೆ ಟೀಂ ಇಂಡಿಯಾ ಪ್ಲ್ಯಾನ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತ ಮತ್ತು ಬಾಂಗ್ಲಾದೇಶ  ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ  ಆರಂಭವಾಗುತ್ತಿದೆ.

ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸರಣಿಯ ಮೊದಲ ಟೆಸ್ಟ್‌ ಪಂದ್ಯ ನಡೆಯಲಿದೆ.‌ 2023-25ನೇ ಸಾಲಿನ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಭಾಗವಾಗಿ ನಡೆಯುತ್ತಿರುವ ಟೆಸ್ಟ್‌ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ

ಪ್ರಸಕ್ತ ವರ್ಷದ ಆರಂಭದಲ್ಲಿ ಭಾರತವು ಆಡಿದ್ದ ಕೊನೆಯ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಜಯ ಸಾಧಿಸಿತ್ತು. ಅದಾದ ಬಳಿಕ ಟೆಸ್ಟ್‌ ಸರಣಿಯಲ್ಲಿ ತಂಡ ಕಣಕ್ಕಿಳಿದಿಲ್ಲ. ಕೊನೆಯ ಬಾರಿಗೆ ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಗೆಲುವು ಸಾಧಿಸಿದ್ದ ಭಾರತ, ಏಕದಿನ ಸರಣಿ ಸೋತು ತೀವ್ರ ಮುಖಭಂಗ ಅನುಭವಿಸಿತ್ತು. ಏಕದಿನ ಸರಣಿ ಸೋತಿದ್ದ ನಾಯಕ ರೋಹಿತ್‌ ಶರ್ಮಾ ಪಡೆ, ಇದೀಗ ನಜ್ಮುಲ್ ಹೊಸೈನ್ ಶಾಂಟೊ ಬಳಗದ ವಿರುದ್ಧ ತವರಿನ ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ.

ನೂತನ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಬಳಿಕ, ಗೌತಮ್‌ ಗಂಭೀರ್‌ ಅವರಿಗೆ ಇದು ಮೊದಲ ಟೆಸ್ಟ್‌ ಸರಯಾಗಿದ್ದು ಸವಾಲಿನದ್ದು ಸಹ ಆಗಿದೆ. ಭಾರತದ ವಿರುದ್ಧ ಬಾಂಗ್ಲಾದೇಶ ತಂಡ ಇದುವರೆಗೂ ಟೆಸ್ಟ್‌ ಸರಣಿ ಗೆದ್ದಿಲ್ಲ. ಹಾಗಂತ, ಬಾಂಗ್ಲಾ ಹುಲಿಗಳನ್ನು ರೋಹಿತ್ ಶರ್ಮಾ ಪಡೆ ಲಘುವಾಗಿ ಪರಿಗಣಿಸುವಂತಿಲ್ಲ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!