ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಅಂತಿಮಘಟ್ಟ ತಲುಪಿದೆ. ಇಂದು ನಡೆಯಲಿರೋ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ಮಧ್ಯಾಹ್ನ 2:30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಈವರೆಗೆ ಭಾರತ ಮತ್ತು ಆಸೀಸ್ ನಡುವೆ 4 ಪಂದ್ಯಗಳು ನಡೆದಿದ್ದು, 2 ರಲ್ಲಿ ಭಾರತ, 1ರಲ್ಲಿ ಆಸ್ಟ್ರೇಲಿಯಾ ಗೆದ್ದರೆ, 2009ರಲ್ಲಿ ಒಂದು ಪಂದ್ಯ ಮಳೆಗೆ ಬಲಿಯಾಗಿತ್ತು.