IND vs BAN | ಟೀಂ ಇಂಡಿಯಾ 404ಕ್ಕೆ ಆಲೌಟ್‌: ವೇಗಿಗಳ ಬಿಗಿ ದಾಳಿಗೆ ಕುಸಿದ ಬಾಂಗ್ಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ((India Vs Bangladesh)) 404 ರನ್‌ಗಳಿಗೆ ಆಲೌಟ್ ಆಗಿದೆ. ಪ್ರತಿಯಾಗಿ ಬ್ಯಾಂಟಿಂಗ್‌ ಗೆ ಇಳಿದಿರುವ ಬಾಂಗ್ಲಾ 97 ರನ್‌ ಗೆ 5 ವಿಕೆಟ್‌ ಕಳೆದುಕೊಂಡಿದ್ದು, ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದೆ.
ಮೊದಲ ದಿನ ಅಜೇಯರಾಗಿ ಉಳಿದಿದ್ದ ಶ್ರೇಯಸ್ ಅಯ್ಯರ್ 86 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ‌ಆ ಬಳಿಕ ಅದ್ಭುತ ಆಟವಾಡಿದ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್​ 93 ರನ್​ಗಳ ಜೊತೆಯಾಟ ನಡೆಸಿದರು. ಅನುಭವಿ ಅಶ್ವಿನ್ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 58 ರನ್ ಬಾರಿಸಿದರೆ, ಬ್ಯಾಟಿಂಗ್‌ ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ 5 ಬೌಂಡರಿ ಸಹಿತ 40 ರನ್ ಸಿಡಿಸಿದರು. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ ಮತ್ತು ಮೆಹಿದಿ ಹಸನ್ ತಲಾ ನಾಲ್ಕು ವಿಕೆಟುಗಳನ್ನು ಕಬಳಿಸಿದರೆ, ಎಬಾಡೋತ್ ಹೊಸೈನ್ ಮತ್ತು ಖಲೀದ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.
ಅಂತಿಮವಾಗಿ ಭಾರತ 404 ರನ್‌ ಗಳಿಗೆ ಪತನವಾಯಿತು. ಆ ಬಳಿಕ ಇನ್ನಿಂಗ್ಸ್‌ ಆರಂಭಿಸಿದ ಬಾಂಗ್ಲಾ ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿತು. ಒಂದು ಹಂತದಲ್ಲಿ ಬಾಂಗ್ಲಾ 5 ರನ್‌ ಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಪ್ರಸ್ತುತ 5 ವಿಕೆಟ್ ಗೆ 97 ರನ್‌ ಕಲೆಹಾಕಿದೆ. ಉಮೇಶ್ ಯಾದವ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!