Saturday, February 4, 2023

Latest Posts

India Vs Bangladesh | ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್: ತಂಡದಲ್ಲಿ ದೊಡ್ಡ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಢಾಕಾದಲ್ಲಿ ಪ್ರಾರಂಭಗೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಲಿಟನ್‌ ದಾಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. 2015 ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಮೊದಲ ಬಾರಿಗೆ ಬಾಂಗ್ಲಾದಲ್ಲಿ ಏಕದಿನ ಸರಣಿಯನ್ನಾಡುತ್ತಿದೆ.
ಈ ಸರಣಿಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದು ಭಾರತ ತಂಡ ಬಲಿಷ್ಠವಾಗಿ ಕಾಣುತ್ತಿದೆ. ಜೊತೆಗೆ ಶಹಬಾಜ್‌ ಅಹ್ಮದ್‌ ಹಾಗೂ ಕುಲದೀಪ್‌ ಸೇನ್‌ ರಂತಹ ಯುವ ಆಟಗಾರರಿಗೆ ಸ್ಥಾನ ಕಲ್ಪಿಸಲಾಗಿದೆ. ವಿಕೆಟ್‌ ಕೀಪರ್‌ ರಿಶಬ್ ಪಂತ್‌ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದು, ರಾಹುಲ್‌ ಕೀಪಿಂಗ್‌ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಉಳಿದ ಎರಡು ಏಕದಿನ ಪಂದ್ಯಗಳೂ ಇಲ್ಲಿಯೇ ನಡೆಯಲಿವೆ.

ಭಾರತ ತಂಡ:
ರೋಹಿತ್ ಶರ್ಮಾ (c), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್.

ಬಾಂಗ್ಲಾದೇಶ ತಂಡ:
ಲಿಟ್ಟನ್ ದಾಸ್ (c), ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (wk), ಮಹ್ಮುದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!