ಭಾರತ – ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ: ಗೆಲ್ಲುವ ಆತ್ಮವಿಶ್ವಾಸದಲ್ಲಿ ರೋಹಿತ್ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ – ಇಂಗ್ಲೆಂಡ್ ನಡುವೆ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ಬೌಲಿಂಗ್​ ಆಯ್ದುಕೊಂಡಿದೆ. ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್​ಗಳ ಗೆಲುವು ದಾಖಲು ಮಾಡಿರುವ ರೋಹಿತ್ ಬಳಗ, ಇಂದಿನ ಪಂದ್ಯದಲ್ಲಿ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಇಂದಿನ ಪಂದ್ಯಕ್ಕಾಗಿ ವಿರಾಟ್​ ಕೊಹ್ಲಿ ಕಮ್​​ಬ್ಯಾಕ್​ ಮಾಡಿದ್ದಾರೆ.
ಇಂದಿನ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.ಹೀಗಾಗಿ, ಆಡುವ 11ರ ಬಳಗದಿಂದ ಶ್ರೇಯಸ್​ ಅಯ್ಯರ್​ಗೆ ಕೈಬಿಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಇಂಗ್ಲೆಂಡ್​​ ಆಡುವ 11ರ ಬಳಗ: ಜೇಸನ್ ರಾಯ್​, ಜಾನಿ ಬೈರ್​​ಸ್ಟೋ. ಜೋ ರೂಟ್, ಬೆನ್​ ಸ್ಟೋಕ್ಸ್​, ಜೋಸ್ ಬಟ್ಲರ್​​(ವಿ.ಕಿ,ಕ್ಯಾಪ್ಟನ್​), ಲಿವಿಗ್​​ಸ್ಟೋನ್​, ಮೊಯಿನ್​ ಅಲಿ, ಓವರ್​​ಟೊನ್​, ಡೇವಿಡ್ ವಿಲ್ಲಿ, ಕೇರ್ಸ್​, ಟೊಪ್ಲೆ

ಭಾರತ ಆಡುವ 11ರ ಬಳಗ: ರೋಹಿತ್ ಶರ್ಮಾ(ಕ್ಯಾಪ್ಟನ್), ಶಿಖರ್ ಧವನ್​, ವಿರಾಟ್​ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್​(ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ,ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್​, ಪ್ರಸಿದ್ಧ್ ಕೃಷ್ಣ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!