ENG VS IND | ಇಂದು ದ್ವಿತೀಯ ಟಿ20: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ರೋಹಿತ್‌ ಬಳಗ; ಸ್ಟಾರ್‌ ಗಳು ಕಮ್‌ ಬ್ಯಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯವನ್ನು ಭರ್ಜರಿಯಾಗಿ ಗೆದ್ದಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ದ್ವಿತೀಯ ಟಿ20 ಕದನವನ್ನೂ ಗೆಲ್ಲುವ ಮೂಲಕ ಸರಣಿ ಗೆಲ್ಲುವ ತವಕದಲ್ಲಿದೆ.
ಮೊದಲ ಟಿ 20 ಪಂದ್ಯದಲ್ಲಿ ಸ್ಟಾರ್‌ ಆಟಗಾರರ ಅಲಭ್ಯತೆಯೊಂದಿಗೆ ಕಣಕ್ಕಿಳಿದಿದ್ದ ಭಾರತ 50 ರನ್‍ಗಳ ಅಮೋಘ ಗೆಲುವು ದಾಖಲಿಸಿತ್ತು. ಯುವ ಆಟಗಾರರು ಸಿಕ್ಕ ಅವಕಾಶದಲ್ಲಿ ಕಮಾಲ್‌ ಮಾಡಿದ್ದರು. ದೀಪಕ್ ಹೂಡಾ, ಸೂರ್ಯಕುಮಾರ್‌ ಯಾದವ್‌, ಅರ್ಷದೀಪ್ ಸಿಂಗ್ ಮಿಂಚಿದ್ದರು. ಮೊದಲ ಟಿ20 ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಕ್ಯಾಪ್ಟನ್‌ ರೋಹಿತ್‌ ಗೆ ಇಂದಿನ ಪಂದ್ಯದ  ಪ್ಲೇಯಿಂಗ್ 11 ಆಯ್ಕೆಯೇ ಸವಾಲಾಗಿ ಪರಿಣಮಿಸಿದೆ. ಯಾರು ಯಾವ ಸ್ಥಾನದಲ್ಲಿ ಆಡಳಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲನ್, ಲಿಯಾಮ್ ಲಿವಿಂಗ್‍ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರಾನ್ ಅವರಂತಹ ಖ್ಯಾತನಾಮ ಆಟಗಾರರನ್ನು ಒಳಗೊಂಡಿರುವ ಇಂಗ್ಲೆಂಡ್‌ ತಂಡ ದ್ವಿತೀಯ ಪಂದ್ಯದಲ್ಲಿ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಲು ಎದುರು ನೋಡುತ್ತಿದೆ. ಇಂಗೆಂಡ್‌ ತಂಡದಲ್ಲಿ ಹೆಚ್ಚಿನ ಬದಲಾವಣೆ ಕಾಣುವ ಸಾಧ್ಯತೆ ಕಡಿಮೆ. ನೂತನ ನಾಯಕ ಜೋಸ್ ಬಟ್ಲರ್ ಗೆ ಚೊಚ್ಚಲ ಸರಣಿಯಲ್ಲಿ ತಂಡವನ್ನು ಸರಣಿ ಗೆಲುವಿನತ್ತ ಮುನ್ನಡೆಸುವ ಒತ್ತಡವಿದೆ. ರಾತ್ರಿ 7 ಗಂಟೆಗೆ ಪಂದ್ಯ ಪ್ರಸಾರ ಕಾಣಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!