ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ.
ಜ.22ರಿಂದ ಫೆಬ್ರವರಿ 2ರ ವರೆಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಬಳಿಕ ಫೆಬ್ರವರಿ 6 ರಿಂದ 12ರ ವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಗೆ ಮಿಸ್ಟರ್-360 ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ, ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನ ಪ್ರಕಟಿಸಿದೆ.
ಭಾರತ ಮತ್ತು ಇಂಗ್ಲೆಂಡ್ ಈವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 13 ಪಂದ್ಯಗಳಲ್ಲಿ ಭಾರತ ಹಾಗೂ 11 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದೆ.