July 23, 2026
Thursday, July 23, 2026
spot_img

ಭಾರತ vs ಐರ್ಲೆಂಡ್ : ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಪಡೆ, ಫೀಲ್ಡಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ತನ್ನ ಹೊಸ ಸರಣಿಯನ್ನು ಆರಂಭಿಸಿದೆ. ಐರ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತ ತಂಡ, ಇಂದು ಬೆಲ್‌ಫಾಸ್ಟ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಹೊಸ ಯುಗ

ಟಿ20 ವಿಶ್ವಕಪ್ ಬಳಿಕ ಭಾರತ ತಂಡವು ಹೊಸ ನಾಯಕನ ಅಡಿಯಲ್ಲಿ ಕಣಕ್ಕಿಳಿಯುತ್ತಿದೆ. ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಈ ಸರಣಿಯಲ್ಲಿ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಐರ್ಲೆಂಡ್ ತಂಡವನ್ನು ಲೋರ್ಕನ್ ಟಕರ್ ಮುನ್ನಡೆಸುತ್ತಿದ್ದಾರೆ.

ಯುವ ಆಟಗಾರರ ಮೇಲೆ ಎಲ್ಲರ ಕಣ್ಣು

ಐಪಿಎಲ್ 2026 ರಲ್ಲಿ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದ 15 ವರ್ಷದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಅವರ ಅಂತಾರಾಷ್ಟ್ರೀಯ ಪದಾರ್ಪಣೆಯ ಮೇಲೆ ಭಾರೀ ಕುತೂಹಲ ಮೂಡಿದೆ. ಆರಂಭಿಕರಾಗಿ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ:

ಭಾರತದ ಪ್ಲೇಯಿಂಗ್ ಇಲೆವೆನ್

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !