ಇಂದು ವಿಶ್ವಕಪ್‌ನ ಮೊದಲ ಸೆಮಿಫೈನಲ್: ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್‌ ಮುಖಾಮುಖಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಹಬ್ಬದ ದಿನ. ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮೊದಲ ಸೆಮಿಫೈನಲ್ ಪ್ರವೇಶಿಸಿದ್ದು, ಅಭಿಮಾನಿಗಳು ಮತ್ತೊಂದು ಗೆಲುವಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಕಿವೀಸ್ ತಂಡವನ್ನು ಎದುರಿಸಲಿದೆ. 2019ರ ವಿಶ್ವಕಪ್‌ನ ಸೆಮೀಸ್‌ನಲ್ಲಿ ಸೋತಿದ್ದ ಟೀಂ ಇಂಡಿಯಾಗೆ ನಾಲ್ಕು ವರ್ಷಗಳ ನಂತರ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವ ಅವಕಾಶ ಸಿಕ್ಕಿದೆ.

ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ ಕಿವೀಸ್ ತಂಡವನ್ನು ಮಣಿಸಿರುವ ಭಾರತ ಸೆಮಿಸ್ ನಲ್ಲೂ ಅದೇ ಬಲ ಪ್ರದರ್ಶಿಸಿ ಫೈನಲ್ ಗೆ ಕಾಲಿಡುವ ಉತ್ಸಾಹದಲ್ಲಿದೆ. ಸತತ ಎರಡನೇ ಬಾರಿಗೆ ವಿಶ್ವಕಪ್‌ನ ಸೆಮಿಸ್‌ನಲ್ಲಿ ನ್ಯೂಜಿಲೆಂಡ್‌ನ್ನು ಎದುರಿಸುತ್ತಿರುವ ಟೀಂ ಇಂಡಿಯಾ, 2019ರ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಿದ್ಧತೆ ನಡೆಸಿದೆ.

ಬೌಲಿಂಗ್ ಮತ್ತು ಫೀಲ್ಡಿಂಗ್ ನಲ್ಲಿ ಮಿಂಚುತ್ತಿರುವ ಭಾರತಕ್ಕೆ ತವರಿನಲ್ಲಿ ಕಿವೀಸ್ ತಂಡವನ್ನು ಮಣಿಸುವುದು ಕಷ್ಟವೇನಲ್ಲ ಎಂಬುದು ಕ್ರಿಕೆಟ್ ಅಭಿಮಾನಿಗಳ ನಂಬಿಕೆ. ಇದಲ್ಲದೆ, ನ್ಯೂಜಿಲೆಂಡ್ ಕೂಡ ದ್ವಿಪಕ್ಷೀಯ ಸರಣಿಗಳು ಮತ್ತು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದೆ.

ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಹಾಗೂ ತವರಿನ ಪಂದ್ಯದಲ್ಲಿ ಭಾರತ ಸುಲಭವಾಗಿ ಸೆಮಿ ಗೆಲ್ಲುವ ಸಾಧ್ಯತೆಗಳಿವೆ ಎನ್ನುತ್ತಾರೆ ಕ್ರೀಡಾ ಕ್ಷೇತ್ರದ ತಜ್ಞರು. ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಕಿವೀಸ್ ವಿರುದ್ಧ ಗೆದ್ದರೆ ಫೈನಲ್ ಪ್ರವೇಶಿಸುವುದು ಖಚಿತ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!