ಟೀಂ ಇಂಡಿಯಾ ವಿರುದ್ಧದ ಕದನಕ್ಕೆ ಹೀಗಿರಲಿದೆ ಪಾಕ್ ಪ್ಲೇಯಿಂಗ್ XI‌, ಯಾರಿಗೆಲ್ಲಾ ಸ್ಥಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್‌ 
ಇಂದು ಏಷ್ಯಾಕಪ್‌ ನಲ್ಲಿ ರಣರೋಚಕ ಪಂದ್ಯ ನಡೆಯಲಿದೆ. ಇಡೀ ವಿಶ್ವವೇ ಕಾತೆರದಿಂದ ಕಾಯುತ್ತಿರುವ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ  ಮುಖಾಮುಖಿ ಆಗಲಿದೆ. ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಯಾವರೀತಿ ಇರಲಿದೆ ಎಂಬ ಕುತೂಹಲ ನಿರ್ಮಾಣವಾಗಿದೆ.
ಟೂರ್ನಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಭಾರತ ಮತ್ತು ಪಾಕಿಸ್ತಾನವು ಹಾಂಗ್‌ ಕಾಂಗ್‌ ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿವೆ. 2018 ರಲ್ಲಿ ಬಾಂಗ್ಲಾದೇಶವನ್ನು ಫೈನಲ್‌ನಲ್ಲಿ ಸೋಲಿಸಿ ಪ್ರಶಸ್ತಿಯನ್ನು ಗೆದ್ದಿದ್ದ ಭಾರತವು ಟೂರ್ನಿಯ ಹಾಲಿ ಚಾಂಪಿಯನ್ ಆಗಿದೆ. ಭಾರತ ಇದುವರೆಗೆ 7 ಏಷ್ಯಾಕಪ್ ಪ್ರಶಸ್ತಿಗಳನ್ನು ಗೆದ್ದಿದೆ. ಶ್ರೀಲಂಕಾ 5 ಪ್ರಶಸ್ತಿಗಳೊಂದಿಗೆ ನಂತರದ ಸ್ಥಾನದಲ್ಲಿದ್ದರೆ, ಪಾಕಿಸ್ತಾನ 2 ಪ್ರಶಸ್ತಿಗಳನ್ನು ಗೆದ್ದಿದೆ.
ಏಷ್ಯಾಕಪ್‌ನ ಕುರಿತು ಹೇಳುವುದಾದರೆ, ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರರ ವಿರುದ್ಧ 14 ಪಂದ್ಯಗಳನ್ನು ಆಡಿದ್ದು, ಭಾರತ 8 ಗೆದ್ದಿದ್ದರೆ, ಪಾಕಿಸ್ತಾನ ಐದು ಪಂದ್ಯಗಳನ್ನು ಗೆದ್ದಿದೆ. ಗುಂಪು ಹಂತದಲ್ಲಿ, ಪ್ರತಿ ತಂಡವು ತಮ್ಮ ಗುಂಪಿನಲ್ಲಿರುವ ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನ ಅಗ್ರ 2 ತಂಡಗಳು ಸೂಪರ್ ಫೋರ್ ಸುತ್ತಿಗೆ ಅರ್ಹತೆ ಪಡೆಯಲಿವೆ. ಸೂಪರ್ 4 ಸುತ್ತಿನಲ್ಲಿ, ಪ್ರತಿ ತಂಡವು ಇನ್ನೊಂದು ಪಂದ್ಯವನ್ನು ಆಡುತ್ತದೆ. ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೆ.11ರಂದು ನಡೆಯಲಿರುವ ಫೈನಲ್‌ಗೆ ಅರ್ಹತೆ ಪಡೆಯಲಿವೆ.
ಪಾಕ್‌ ತಂಡವು ಬೌಂಗ್‌ ವಿಭಾಗದಲ್ಲಿ ಗಾಯಾಳುಗಳ ಸಮಸ್ಯೆಯನ್ನು ಎದುರಿಸುತ್ತಿದೆ. ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ಹೊಡೆತವಾಗಿದೆ. ಮೊಹಮ್ಮದ್ ಹಸ್ನೈನ್ ಅವರನ್ನು ಬದಲಿಯಾಗಿ ಘೋಷಿಸಲಾಗಿದೆ. ತಂಡದ ಯುವ ವೇಗದ ಬೌಲರ್ ಮೊಹಮ್ಮದ್ ವಾಸಿಮ್ ಜೂನಿಯರ್ ಸಹ ಇಂಜೂರಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಅನುಭವಿ ವೇಗದ ಬೌಲರ್ ಹಸನ್ ಅಲಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್‌ 11
ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್, ನಸೀಮ್ ಶಾ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!