ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಅಭಿವೃದ್ಧಿ ಪರ್ವ: ಹತಾಶ ಪಾಕ್‌ ಪ್ರಧಾನಿ ಟ್ವಿಟರ್‌ನಲ್ಲಿ ಪ್ರಲಾಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರಧಾನಿ ಮೋದಿಯವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಜಲವಿದ್ಯುತ್‌ ಸ್ಥಾವರಗಳ ಸ್ಥಾಪನೆ ಸೇರಿದಂತೆ ಸುಮಾರು 20.000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಕಾಶ್ಮೀರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿರುವುದು ಪಾಕ್‌ ಪ್ರಧಾನಿ ಹತಾಶೆಗೆ ಕಾರಣವಾಗಿದೆ. ಪ್ರಧಾನಿ ಮೋದಿ ಕಾಶ್ಮೀರ ಭೇಟಿಗೆ ಪಾಕ್‌ ನೂತನ ಪ್ರಧಾನಿ ಶೆಹಬಾಜ್‌ ಷರೀಫ್‌ ಟ್ವಿಟರ್‌ ನಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರದಲ್ಲಿ ಚೇನಾಬ್‌ ನದಿ ನೀರನ್ನು ಬಳಸಿಕೊಂಡು ಆರಂಭಿಸುತ್ತಿರುವ ರಾಟೆಲ್‌ ಮತ್ತು ಕ್ವಾರ್‌ ಜಲವಿದ್ಯುತ್‌ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿರುವುದು ಸಿಂಧೂ ನದಿ ಒಪ್ಪಂದದ ಉಲ್ಲಂಘನೆ. ಕಾಶ್ಮೀರದಲ್ಲಿ ಬೃಹತ್‌ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಭಾರತವು ಕಾಶ್ಮೀರದಲ್ಲಿ ʼಎಲ್ಲವೂ ಸರಿಯಾಗಿದೆ ʼ ಕಣಿವೆ ರಾಜ್ಯದಲ್ಲಿ ಸಾಮಾನ್ಯ ಸ್ಥಿತಿ ಸ್ಥಾಪಿತವಾಗಿದೆʼ ಎಂದು ಬಿಂಬಿಸಲು ಹತಾಶ ಪ್ರಯತ್ನ ನಡೆಸುತ್ತಿದೆ. ನಾವು ಎಂದಿಗೂ ಕಾಶ್ಮೀರಿಗಳ ಪರ ನಿಲ್ಲುತ್ತೇವೆ ಎಂದು ಟ್ವೀಟ್‌ ಮಾಡಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಪಾಕ್‌ ಪ್ರಧಾನಿ ಮೈಪರಚಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಪಾಕಿಸ್ತಾನದ ಹೊಸ ಪ್ರಧಾನಿಯಾಗಿ ಆಯ್ಕೆಯಾದ ವೇಳೆ ಮಾತನಾಡಿದ್ದ ಶೆಹಬಾಜ್ ಕಾಶ್ಮೀರ ಸಮಸ್ಯೆ ಇತ್ಯರ್ಥಗೊಳ್ಳದೆ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದುವುದು ಸಾಧ್ಯವಿಲ್ಲ ಎಂದು ಹೇಳಿದರು. ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದರ ಬಗ್ಗೆ ಹಲವಾರು ಬಾರಿ ಆಕ್ಷೇಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!