ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅಂತಿಮ, ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ.
ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಪಂದ್ಯ ಆರಂಭವಾಗಲಿದೆ. ಈಗಾಗಲೇ ಎರಡೂ ತಂಡಗಳು ಒಂದೊಂದು ಪಂದ್ಯ ಗೆದ್ದಾಗಿದೆ. ಎರಡೂ ತಂಡಕ್ಕೂ ಮೂರನೇ ಪಂದ್ಯ ಗೆಲ್ಲುವ ತವಕ ಹೆಚ್ಚಾಗಿದೆ.
ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಿ, ಇತಿಹಾಸ ನಿರ್ಮಿಸುವ ಹುಮ್ಮಸ್ಸಿನಲ್ಲಿದೆ. ನಿರ್ಣಾಯಕ ಕದನದಿಂದ ಸೀರೀಸ್ ಯಾರ ಕೈ ಸೇರಲಿದೆ ಎಂದು ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ.
ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 113 ರನ್‌ಗಳ ಜಯ ಸಾಧಿಸಿ ಐತಿಹಾಸಿಕ ಗೆಲುವು ಕಂಡಿದೆ. ಇತ್ತ ದಕ್ಷಿಣ ಆಫ್ರಿಕಾ ಎರಡನೇ ಪಂದ್ಯದಲ್ಲಿ 7 ವಿಕೆಟ್‌ಗಳ ಗೆಲುವು ಕಂಡಿದೆ. ಸಮಬಲದ ಹೋರಾಟ ಇದಾಗಿದ್ದು, ಈ ಪಂದ್ಯದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.