Tuesday, November 25, 2025

India vs South Africa | ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಫ್ರಿಕಾ: ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಮತ್ತು ನಿರ್ಣಾಯಕ ಟೆಸ್ಟ್ ಪಂದ್ಯ ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಭಾರತಕ್ಕೆ ಹೊಸ ನಾಯಕತ್ವ ಸಿಕ್ಕಿದ್ದು, ವಿಕೆಟ್ಕೀಪರ್–ಬ್ಯಾಟರ್ ರಿಷಭ್ ಪಂತ್ ಮೊದಲ ಬಾರಿಗೆ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆಮಾಡಿದ್ದು, ಭಾರತ ಬೌಲಿಂಗ್ ಮೂಲಕ ಆರಂಭಿಸಿದೆ.

ಭಾರತದ ಆಡುವ ಹನ್ನೊಂದರಲ್ಲಿ ಎರಡು ಪ್ರಮುಖ ಬದಲಾವಣೆಗಳು ನಡೆದಿವೆ. ಕುತ್ತಿಗೆ ನೋವಿನಿಂದ ಹೊರಗುಳಿದ ಶುಭ್‌ಮನ್ ಗಿಲ್ ಸ್ಥಾನಕ್ಕೆ ನಿತೀಶ್ ಕುಮಾರ್ ರೆಡ್ಡಿ ಮರಳಿದ್ದಾರೆ. ಅಕ್ಷರ್ ಪಟೇಲ್ ಬದಲಿಗೆ ಎಡಗೈ ಬ್ಯಾಟರ್ ಸಾಯಿ ಸುದರ್ಶನ್‌ ಅವರಿಗೆ ಅವಕಾಶ ದೊರೆತಿದೆ. ದಕ್ಷಿಣ ಆಫ್ರಿಕಾ ತಂಡದಲ್ಲಿಯೂ ಬದಲಾವಣೆ ಕಂಡುಬಂದಿದ್ದು, ಪ್ರಮುಖ ವೇಗದ ಬೌಲರ್ ಕಗಿಸೊ ರಬಾಡ ಹೊರಗುಳಿದರೆ, ಸೆನುರಾನ್ ಮುತ್ತುಸಾಮಿ ತಂಡಕ್ಕೆ ಸೇರಿದ್ದಾರೆ.

ಮೊದಲ ಟೆಸ್ಟ್‌ನಲ್ಲಿ 30 ರನ್‌ಗಳಿಂದ ಸೋತ ಭಾರತ, ಈ ಪಂದ್ಯ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಗುರಿ ಹೊಂದಿದೆ. ಇತ್ತ ದಕ್ಷಿಣ ಆಫ್ರಿಕಾ ಮತ್ತೊಂದು ಗೆಲುವಿನೊಂದಿಗೆ ಸರಣಿ ವಶಪಡಿಸಿಕೊಳ್ಳಲು ಮುನ್ನಡೆ ಸಾಧಿಸಲು ಬಯಸುತ್ತಿದೆ.

error: Content is protected !!