ನಾಯಕನಾಗಿ ಮೊದಲ ಪಂದ್ಯದಲ್ಲೇ ವಿಶೇಷ ದಾಖಲೆ ಬರೆದ ರೋಹಿತ್‌ ಶರ್ಮಾ, 66 ವರ್ಷ ಹಿಂದಿನ ದಾಖಲೆ ಬ್ರೇಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಪ್ರವಾಸಿ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಬಗ್ಗುಬಡಿಯುವ ಮೂಲಕ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
ಟೆಸ್ಟ್‌ ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿಯೇ ಶುಭಾರಂಭ ಮಾಡಿರುವ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ನಾಯಕನಾಗಿ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಅಂತರದಿಂದ ಗೆದ್ದ ಎರಡನೇ ಇಂಡಿಯನ್‌ ಕ್ಯಾಪ್ಟನ್‌ ಎಂಬ ಗರಿಮೆಗೆ ಪಾತ್ರರಾಗಿದ್ದಾರೆ. ಪಾಲಿ ಉಮ್ರಿಗರ್ ಚೊಚ್ಚಲ ನಾಯಕತ್ವದಲ್ಲಿ ಭಾರತ ತಂಡ 1955ರಲ್ಲಿ ಇನಿಂಗ್ಸ್ ಅಂತರದಿಂದ ಗೆದ್ದಿತ್ತು. ಇದೀಗ ರೋಹಿತ್‌ ತಮ್ಮ ಹೆಸರಿಗೂ ಆ ದಾಖಲೆಯನ್ನು ಬರೆದುಕೊಂಡಿದ್ದಾರೆ.
ರವೀಂದ್ರ ಜಡೇಜಾ ಆಲೌಂಡ್‌ ಆಟದ ಬಲದಿಂದ ಭಾರತ ಶ್ರೀಲಂಕಾ ವಿರುದ್ಧ ಅಧಿಕಾರಯುತ ಗೆಲುವು ದಾಖಲಿಸಿತು. ಮೊದಲ ಇನ್ನಿಂಗ್ಸ್‌ ನಲ್ಲಿ ಬ್ಯಾಟಿಂಗ್‌ ನಲ್ಲಿ ಅಜೇಯ 175 ರನ್ ಕಲೆಹಾಕಿದ ಜಡೇಜಾ, ಬೌಲಿಂಗ್‌ ನಲ್ಲಿ 5 ವಿಕೆಟ್‌ ಕಿತ್ತಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!