ಮಾ.12ಕ್ಕೆ ಬೆಂಗಳೂರಿನಲ್ಲಿ‌ ನಡೆಯಲಿದೆ ಶ್ರೀಲಂಕಾ-ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀಲಂಕಾ ವಿರುದ್ಧದ ಎರಡನೇ ಮತ್ತು ಕೊನೆಯ ಟೆಸ್ಟ್‌ ಪಂದ್ಯ ಮಾ.12ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲು ಸಕಲ ಸಿದ್ಧತೆ ನಡೆಯುತ್ತಿದೆ.
ಮಾ.12ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುವ ಪಂದ್ಯಾವಳಿ ಹಗಲು ರಾತ್ರಿ ಟೆಸ್ಟ್‌ ಪಂದ್ಯಕ್ಕೆ ಪಿಂಕ್‌ ಬಾಲ್‌ ಬಳಕೆ ಮಾಡಲಾಗುತ್ತದೆ.
ಈ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ಅಕ್ಷರ್‌ ಪಟೇಲ್‌ ತಂಡಕ್ಕೆ ವಾಪಾಸ್‌ ಆಗಿದ್ದಾರೆ. ಕುಲದೀಪ್‌ ಯಾದವ್‌ ಅವರನ್ನು ತಂಡದಿಂದ ಕೈ ಬಿಡಲಾಗಿದೆ.  ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಎರಡನೇ ಪಂದ್ಯಾವಳಿಯಲ್ಲೂ ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ.
ಈ ಎರಡನೇ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಕ್ಲೀನ್‌ ಸ್ವೀಪ್‌ ಮಾಡುವ ಉತ್ಸುಕದಲ್ಲಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!