ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ.
ಭಾನುವಾರ ಧರ್ಮಶಾಲಾದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 6 ವಿಕೆಟ್ ಗಳ ಜಯಗಳಿಸುವ ಮೂಲಕ ಮತ್ತೊಂದು ಕ್ಲೀನ್ ಸ್ವೀಪ್ ಮಾಡಿದೆ.
ಇದು ಟೀಂ ಇಂಡಿಯಾದ ಸತತ 12ನೇ ಟಿ20 ಗೆಲುವಾಗಿದ್ದು, ಈ ಹಿಂದೆ 12 ಪಂದ್ಯಗಳನ್ನು ಗೆದ್ದ ಅಫ್ಘಾನಿಸ್ತಾನ ಮೊದಲ ಸ್ಥಾನದಲ್ಲಿದ್ದು, ಮುಂದಿನ ಸರಣಿ ಗೆದ್ದರೆ ಭಾರತ ಅಫ್ಘಾನಿಸ್ತಾನವನ್ನು ಹಿಂದಿಕ್ಕಲಿದೆ.
ಕಳೆದ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು, ವೈಟ್ ವಾಶ್ ಮಾಡಿದ ಭಾರತ ಈಗ ಮತ್ತೊಂದು ಗೆಲುವು ಪಡೆದಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.
ಶ್ರೇಯಸ್ ಅಯ್ಯರ್ ಬ್ಯಾಟಿಂಗ್ನಲ್ಲಿ ಮತ್ತೊಮ್ಮೆ ಅಬ್ಬರಿಸಿ ಹ್ಯಾಟ್ರಿಕ್ ಅರ್ಧಶತಕ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.