ಭಾರತ ವಿರುದ್ಧ ಟಿ20 ಸರಣಿ : ಅಫ್ಘಾನಿಸ್ತಾನ ಟೀಮ್ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಅಫ್ಘಾನಿಸ್ತಾನ ತಂಡ ತನ್ನ 19 ಸದಸ್ಯರ ತಂಡವನ್ನು ಇಂದು ಪ್ರಕಟಿಸಿದೆ.

ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಟಿ20 ಸರಣಿಗಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದು, ಇಬ್ರಾಹಿಂ ಜರ್ದಾನ್ (Ibrahim Zadran) ನಾಯಕತ್ವ ವಹಿಸಿಕೊಂಡಿದ್ದಾರೆ. ಈ ವರ್ಷ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ (T20 World Cup 2024) ಇರುವುದರಿಂದ ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಟಿ20 ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾದ (Team India) ಸಿದ್ಧತೆಗೆ ಇದು ಕೊನೆಯ ಟಿ20 ಸರಣಿ ಆಗಿರುವುದರಿಂದ ಟೀಂ ಇಂಡಿಯಾ ಈ ಸರಣಿಯನ್ನು ಗಂಭೀರವಾಗಿ ಪರಿಣಮಿಸಿದೆ.

ಭಾರತ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ತಂಡ
ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!