ಇಂದು ಭಾರತ-ವೆಸ್ಟ್‌ ಇಂಡೀಸ್‌ ನಡುವೆ ಎರಡನೇ ಸಮರ: ಗೆಲ್ಲುವ ಭರವಸೆಯಲ್ಲಿ ರೋಹಿತ್‌ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವೆ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ ಗಳ ಭರ್ಜರಿ ಜಯಗಳಿಸಿತ್ತು. ಈ ಮೂಲಕ ಇಂದು ಕೂಡ ಗೆಲ್ಲುವ ನಿರೀಕ್ಷೆ ಹೆಚ್ಚಿಸಿದೆ.
ಇಂದು ಕೂಡ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯ ನಡೆಯಲಿದ್ದು, ನಾಯಕ ರೋಹಿತ್‌ ಶರ್ಮಾ ಪಡೆ ಉತ್ತಮ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ. ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್‌ ರಾಹುಲ್‌ ಸೋಮವಾರ ತಂಡವನ್ನು ಸೇರಿಕೊಂಡಿದ್ದಾರೆ. ಅಲ್ಲದೆ ಮಾಯಾಂಕ್‌ ಅಗರ್ವಾಲ್‌, ನವದೀಪ್‌ ಸೈನಿ ಕೂಡ ಕೋವಿಡ್‌ ನಿಂದ ಗುಣಮುಖರಾಗಿ ತಂಡಕ್ಕೆ ವಾಪಾಸ್‌ ಆಗಿದ್ದಾರೆ.
ಮೊದಲ ಪಂದ್ಯದಲ್ಲಿ ಸಂಚಲನ ಸೃಷ್ಟಿಸಿದ ಯುಜ್ವೇಂದ್ರ ಚಹಲ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ದೀಪಕ್‌ ಮೇಲೆ ಭರವಸೆ ಹೆಚ್ಚಿದೆ.
ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು, ಸ್ಟಾರ್‌ ಸ್ಪೋರ್ಟ್ಸ್‌ ನೆಟ್ ವರ್ಕ್‌, ಡಿಸ್ನಿ ಹಾಟ್‌ ಸ್ಟಾರ್‌ ನಲ್ಲಿ ವೀಕ್ಷಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!