ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಇಂದಿನಿಂದ ಶುಭ್‌ಮನ್ ಗಿಲ್ ಕ್ಯಾಪ್ಟನ್ಸಿ ಆರಂಭವಾಗಲಿದ್ದು, ಅಗ್ನಿ ಪರೀಕ್ಷೆ ಸಮಯವಾಗಿದೆ.
ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿವನ್ನು ಯುವ ಆಟಗಾರ ಶುಭ್‌ಮನ್ ಗಿಲ್ ಮುನ್ನಡೆಸಲಿರುವುದು ವಿಶೇಷ.
ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.
ಶುಭ್‌ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ. (ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್- ಉಳಿದ ಮೂರು ಪಂದ್ಯಗಳಿಗೆ).