Friday, October 7, 2022

Latest Posts

ಗಾಯಾಳು ಸುಂದರ್‌ ಬದಲು ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ RCB ಯುವ ಆಟಗಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ 
ದೇಶಿಯ ಟೂರ್ನಿಗಳು ಹಾಗೂ ಐಪಿಎಲ್‌ ನಲ್ಲಿ ಆರ್ಸಿಬಿ ಪರ ಸತತವಾಗಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿರುವ ಬಂಗಾಳದ ಯುವ ಆಲ್ರೌಂಡ್‌ ಶಹಬಾಜ್ ಅಹ್ಮದ್ ಪರಿಶ್ರಮಕ್ಕೆ ಪ್ರತಿಫಲ ದೊರೆತಿದೆ. ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಗಾಯಾಳು ವಾಷಿಂಗ್ಟನ್ ಸುಂದರ್ ಬದಲಿಗೆ ಶಹಬಾಜ್ ಅಹ್ಮದ್ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ​ನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್​ಶಿಪ್​ ಪಂದ್ಯದಲ್ಲಿ ಆಡುತ್ತಿದ್ದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಸುಂದರ್‌ ಜಿಂಬಾಬ್ವೆ ಪ್ರವಾಸದಿಂದ ಹೊರಬಿದ್ದಿದ್ದಾರೆ. ಹರಾರೆಯಲ್ಲಿ ಆಗಸ್ಟ್ 18 ರಿಂದ ಪ್ರಾರಂಭವಾಗುವ ಜಿಂಬಾಬ್ವೆ ವಿರುದ್ಧದ ಸರಣಿಗೆ ಸುಂದರ್‌ ಸ್ಥಾನದಲ್ಲಿ ಶಹಬಾಜ್ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ ಆಯ್ಕೆ ಸಮಿತಿ ಮಂಗಳವಾರ ಪ್ರಕಟಿಸಿದೆ.
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಯುಜ್ವೇಂದ್ರ ಚಹಾಲ್‌ಗೆ ವಿಶ್ರಾಂತಿ ನೀಡಲಾಗಿದೆ. ಸಂಪೂರ್ಣ ಫಿಟ್‌ ಆಗಿರುವ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಮತ್ತೊಂದೆಡೆ ಜಿಂಬಾಬ್ವೆ ಏಕದಿನ ಹಾಗೂ ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿ ವಿಶ್ವಾಸದಲ್ಲಿದೆ.
ಭಾರತ ತಂಡ:
ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಶಹಬಾಜ್ ಅಹ್ಮದ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!