Tuesday, October 3, 2023

Latest Posts

ಭಾರತ ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧ ಬಯಸುತ್ತೆ ಆದರೆ…!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧಕ್ಕಾಗಿ ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಮುಕ್ತ ವಾತಾವರಣ ಇರಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry of External Affairs) ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಗುರುವಾರ ಹೇಳಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif )ಭಾರತದೊಂದಿಗೆ ಮಾತನಾಡಲು ಇಚ್ಛೆ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ ಹೇಳಿಕೆ ನೀಡಿದ ಅವರು, ಪಾಕಿಸ್ತಾನದ ಪ್ರಧಾನಿಯವರ ಹೇಳಿಕೆ ಕುರಿತು ನಾವು ವರದಿಗಳನ್ನು ನೋಡಿದ್ದೇವೆ. ಪಾಕ್ ಸಹಿತ ಎಲ್ಲಾ ನೆರೆಯ ದೇಶಗಳೊಂದಿಗೆ ನಾವು ಸಾಮಾನ್ಯ ಸಂಬಂಧವನ್ನು ಬಯಸುತ್ತೇವೆ ಎಂಬುದು ಭಾರತದ ಸ್ಪಷ್ಟ ಮತ್ತು ಸ್ಥಿರವಾದ ನಿಲುವು ಎಲ್ಲರಿಗೂ ತಿಳಿದಿದೆ. ಆದರೆ ಈ ಮಾತುಕತೆಗಾಗಿ ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾಗಿರುವ ವಾತಾವರಣ ಅತ್ಯಗತ್ಯ ಎಂದಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಖನಿಜ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶೆಹಬಾಜ್ ಷರೀಫ್, ರಾಷ್ಟ್ರವನ್ನು ನಿರ್ಮಿಸಲು ನಾವು ನೆರೆಹೊರೆಯವರೊಂದಿಗೆ ಮಾತನಾಡಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!