ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಇಂದು ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಜನ್ಮ ದಿನ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಿ. ವಿ. ನರಸಿಂಹರಾವ್ ಅವರ 100ನೇ ಜನ್ಮ ದಿನದ ಈ ಸಮಯದಲ್ಲಿ ಅವರಿಗೆ ನನ್ನ ಗೌರವ ನಮನಗಳು. ರಾಷ್ಟ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಭಾರತ ಎಂದಿಗೂ ಸ್ಮರಿಸುತ್ತದೆ. ಅವರು ಈ ದೇಶಕ್ಕೆ ಅಪಾರ ಜ್ಞಾನ ಮತ್ತು ಚಿಂತನಶೀಲತೆಯನ್ನು ಕರುಣಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಟ್ವೀಟ್ ಜೊತೆಯಲ್ಲಿ ಕಳೆದ ಜೂನ್ ತಿಂಗಳಿನ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪಿ. ವಿ. ನರಸಿಂಹರಾವ್ ಅವರ ಕುರಿತು ಮಾತನಾಡಿರುವ ವಿಡಿಯೋವನ್ನು ಮೋದಿಯವರು ಶೇರ್ ಮಾಡಿದ್ದಾರೆ.
- Advertisement -