ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಐದು ವರ್ಷಗಳಲ್ಲಿ ಭಾರತದ ಆಟೋಮೊಬೈಲ್ ಉದ್ಯಮವು ವಿಶ್ವದ ನಂಬರ್ ಒನ್ ಸ್ಥಾನದಲ್ಲಿರುತ್ತದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದರು.
ಭಾರತದಲ್ಲಿ ಸಾಕಷ್ಟು ಕಾರ್ಮಿಕರು ಮತ್ತು ಕಚ್ಚಾ ವಸ್ತುಗಳು ಲಭ್ಯವಿರುವುದರಿಂದ ಭಾರತದಲ್ಲಿ ಆಟೋಮೊಬೈಲ್ ಉದ್ಯಮವು ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ.
ಪಳೆಯುಳಿಕೆ ಇಂಧನ ಚಾಲಿತ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುವುದರಿಂದ ಆರ್ಥಿಕವಾಗಿ ಲಾಭದಾಯಕವಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.