Thursday, October 30, 2025

ಮುಂದಿನ ದಿನಗಳಲ್ಲಿ ಭಾರತ ತನ್ನದೇ ಬಾಹ್ಯಾಕಾಶ ನಿಲ್ದಾಣ ನಿರ್ಮಿಸಲಿದೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ರಾಷ್ಟ್ರೀಯ ಬಾಹ್ಯಾಕಾಶ ದಿನದ ಹಿನ್ನೆಲೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಅವರು, ಭಾರತವು ಶೀಘ್ರದಲ್ಲೇ ಗಗನಯಾತ್ರಿಗಳ ಗುಂಪನ್ನು ನಿರ್ಮಿಸಲಿದೆ ಎಂದು ಅವರು ಘೋಷಿಸಿದ್ದಾರೆ. ಗಗನಯಾನದತ್ತ ಆಸಕ್ತಿ ತೋರಿಸಲು ಮೋದಿ ಯುವಕ-ಯುವತಿಯರನ್ನು ಮನವಿ ಮಾಡಿದ್ದಾರೆ.

ಇಂದು ಭಾರತವು ಅರೆ-ಕ್ರಯೋಜೆನಿಕ್ ಎಂಜಿನ್‌ಗಳು ಮತ್ತು ವಿದ್ಯುತ್ ಪ್ರೊಪಲ್ಷನ್‌ನಂತಹ ಅದ್ಭುತ ತಂತ್ರಜ್ಞಾನಗಳಲ್ಲಿ ವೇಗವಾಗಿ ಮುನ್ನಡೆಯುತ್ತಿದೆ. ಶೀಘ್ರದಲ್ಲೇ ಎಲ್ಲ ವಿಜ್ಞಾನಿಗಳ ಕಠಿಣ ಪರಿಶ್ರಮದಿಂದ ಭಾರತವು ಗಗನಯಾನದೊಂದಿಗೆ ಮೇಲೇರಲಿದೆ. ಮುಂಬರುವ ದಿನಗಳಲ್ಲಿ ಭಾರತವು ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

error: Content is protected !!