March 22, 2026
Sunday, March 22, 2026
spot_img

ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ: ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡು ದಿನಗಳ ಭೇಟಿಗೆ ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರಿಗೆ ಖುದ್ದು ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು.

ಬಳಿಕ ಉಭಯ ನಾಯಕರು ಇಸ್ರೇಲ್ ಸಂಸತ್ ಪ್ರವೇಶಿಸಿದ್ದು, ಈ ವೇಳೆ “ಮೋದಿ, ಮೋದಿ” ಎಂಬ ಘೋಷಣೆಗಳು ಕೇಳಿಬಂದವು. “ನಮಸ್ತೆ” ಯೊಂದಿಗೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಈ ವೇಳೆ ಸಂಸತ್​​ನ ಎಲ್ಲ ಸದಸ್ಯರೂ ಎದ್ದುನಿಂತು ಕೈ ಜೋಡಿಸಿ ನಮಸ್ಕಾರ ಮಾಡಿ ಮೋದಿಯನ್ನು ಬರಮಾಡಿಕೊಂಡರು.

ಈ ವೇಳೆ ಇಸ್ರೇಲ್ ಸಂಸತ್ ನೆಸ್ಸೆಟ್‌ ನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ ಎಂದು ಗುಡುಗಿದರು.

ನಾನು ಭಾರತದ ಪ್ರಧಾನಮಂತ್ರಿಯಾಗಿ ಮತ್ತು ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಭಯೋತ್ಪಾದನೆಯು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಅತ್ಯಂತ ದೊಡ್ಡ ಬೆದರಿಕೆಯಾಗಿದೆ. ಇದು ಮಾನವೀಯತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

ಆಕ್ಟೋಬರ್ 7ರಂದು ಹಮಾಸ್ ನಡೆಸಿದ ಬರ್ಬರ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬರಿಗೂ ಭಾರತೀಯರ ಪರವಾಗಿ ನಾನು ಸಂತಾಪವನ್ನು ಸೂಚಿಸುತ್ತೇನೆ. ನಿಮ್ಮ ನೋವು, ನಿಮ್ಮ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ. ಭಾರತವು ಸದಾ ಇಸ್ರೇಲ್‌ನೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದರು.

ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ಶಾಶ್ವತ ಶಾಂತಿಯ ಭರವಸೆಯನ್ನು ಹೊಂದಿದೆ. ಶಾಂತಿಯ ಹಾದಿ ಯಾವಾಗಲೂ ಸುಲಭವಲ್ಲ. ಈ ಪ್ರದೇಶದಲ್ಲಿ ಸಂವಾದ, ಶಾಂತಿ ಮತ್ತು ಸ್ಥಿರತೆಗಾಗಿ ಭಾರತವು ನಿಮ್ಮೊಂದಿಗೆ ಮತ್ತು ಜಗತ್ತಿನೊಂದಿಗೆ ಸದಾ ನಿಲ್ಲುತ್ತದೆ ಎಂದು ಪ್ರಧಾನಿ ಮೋದಿ ನೆಸ್ಸೆಟ್‌ನಲ್ಲಿ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !