‘ಶೀಘ್ರದಲ್ಲೇ ಭಾರತ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲಿದೆ’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಕೀಯ ಇತಿಹಾಸದಲ್ಲೇ ಭಾರತಕ್ಕಿದು ಪರಿವರ್ತನೆ ಯುಗವಾಗಿದ್ದು, ಶೀಘ್ರದಲ್ಲೇ ಭಾರತ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಳೆದ 11 ವರ್ಷಗಳ ಪ್ರಧಾನಿ ಮೋದಿ ಆಡಳಿತದಲ್ಲಿ ಬಡತನವನ್ನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಸಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರ ಪಣ ತೊಟ್ಟಿದೆ ಎಂದು ಹೇಳಿದರು.

ವಿಕಾಸವೇ ನಮ್ಮ ಮಂತ್ರ, ಶಾಂತಿ- ಸುವ್ಯವಸ್ಥೆಯೇ ನಮ್ಮ ಧೈಯ. ಈ ನಿಟ್ಟಿ ನಲ್ಲಿಯಶಸ್ವಿಯಾಗಿ ಮುನ್ನಡೆಯುತ್ತಿರುವ ಭಾರತ ಸದ್ಯ ವಿಶ್ವದ 4ನೇ ಅತೀದೊಡ್ಡ ಆರ್ಥಿಕ ದೇಶವಾಗಿದ್ದು, ಇಷ್ಟರಲ್ಲೇ ಮತ್ತೊಂದು ಹೊಸ ಮೈಲಿಗಲ್ಲು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!