ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಟೂರ್ನಿಯ 3ನೇ ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ 66 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿ, ಅಫ್ಘಾನಿಸ್ತಾನಕ್ಕೆ 211 ರನ್ ಗಳ ಬೃಹತ್ ಗುರಿ ನೀಡಿತ್ತು.
ಆರಂಭಿಕ ಆಟರಾಗಿ ಬಂದಿದ್ದ ಕೆಎಲ್ ರಾಹುಲ್ (69) ಮತ್ತು ರೋಹಿತ್ ಶರ್ಮಾ (74) ರನ್ ಗಳ ಭರ್ಜರಿ ಆಟದೊಂದಿಗೆ ಟೀಂ ಇಂಡಿಯಾ ಬೃಹತ್ ಮೊತ್ತ ಪಡೆಯುವಲ್ಲಿ ಯಶಸ್ವಿಯಾಗಿದೆ. ರಿಷಬ್ ಪಂತ್ ಅಜೇಯ 27 ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 35 ರನ್ ಬಾರಿಸಿದ್ದಾರೆ.
ಭಾರತ ಅಫ್ಘಾನಿಸ್ತಾನವನ್ನು 20 ಓವರ್ ಗಳಲ್ಲಿ 144/7ಕ್ಕೆ ಕಟ್ಟಿ ಹಾಕುವ ಮೂಲಕ 66 ರನ್ ಗಳ ಜಯ ಗಳಿಸಿದೆ. ಟೂರ್ನಿಯಲ್ಲಿ ಭಾರತಕ್ಕೆ ಮೊದಲ ಗೆಲುವು ಇದಾಗಿದೆ.
74 ರನ್ ಸಿಡಿಸಿ ಪಂದ್ಯದ ಗೆಲುವಿಗೆ ಕಾರಣರಾದ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.