ASIAN GAMES| ಕಬಡ್ಡಿಯಲ್ಲಿ ಭಾರತ ಮಹಿಳಾ ತಂಡಕ್ಕೆ ಒಲಿದ ಚಿನ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಕಬಡ್ಡಿಯಲ್ಲಿ ಭಾರತದ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಶನಿವಾರದಂದು ನಡೆದ ಸ್ಪರ್ಧೆಯಲ್ಲಿ ಭಾರತಕ್ಕೆ ಹಲವು ಪದಕಗಳನ್ನು ಬಾಚಿಕೊಂಡಿದ್ದು, ಈ ಮೂಲಕ ಭಾರತವು 100 ಪದಕಗಳ ಮೈಲಿಯನ್ನು ದಾಟಿದೆ.

ಭಾರತದ ಮಹಿಳಾ ಕಬಡ್ಡಿ ತಂಡವು 26-25 ಅಂಕಗಳಿಂದ ಚೈನೀಸ್ ತೈಪೆ ವಿರುದ್ಧ ಯಶಸ್ಸನ್ನು ಸಾಧಿಸಿದ್ದು, ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.

ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದು, ಮಹಿಳಾ ತಂಡಕ್ಕೆ ಟ್ವೀಟ್‌ ಮೂಲಕ ಶುಭಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!