ಇಂಗ್ಲೆಂಡ್‌ ನೆಲದಲ್ಲಿ ಐತಿಹಾಸಿಕ ಟಿ20ಐ ಸರಣಿ ಗೆದ್ದ ಭಾರತ ವನಿತೆಯರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮಹಿಳಾ ತಂಡ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ದ ಐದು ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆದರೂ ಮೂರು ಪಂದ್ಯಗಳ ಗೆಲುವಿನ ಆಧಾರದ ಮೇಲೆ ಹರ್ಮನ್‌ಪ್ರೀತ್‌ ಕೌರ್‌ ನಾಯಕತ್ವದ ಭಾರತ ತಂಡ, ಆಂಗ್ಲರ ನಾಡಿನಲ್ಲಿ 3-2 ಅಂತತದಲ್ಲಿ ಟಿ20ಐ ಸರಣಿಯನ್ನು ವಶಪಡಿಸಿಗೊಂಡಿದೆ.

ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಐದನೇ ಟಿ20ಐ ಪಂದ್ಯದಲ್ಲಿ ಭಾರತ ನೀಡಿದ್ದ 168 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಇಂಗ್ಲೆಂಡ್‌ ತಂಡ, ಡೇನಿಯಲ್‌ ವ್ಯಾಟ್‌ (56 ರನ್‌) ಹಾಗೂ ಸೋಫಿಯಾ ಡಂಕ್ಲಿ (46) ಅವರ ಬ್ಯಾಟಿಂಗ್‌ ಬಲದಿಂದ ಕೊನೆಯ ಎಸೆತದಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವು ದಡ ಸೇರಿತು.

ಇದಕ್ಕೂ ಮುನ್ನ ಮೊದಲು ಬ್ಯಾಟ್‌ ಮಾಡಿದ್ದ ಭಾರತ ತಂಡ, ಶಫಾಲಿ ವರ್ಮಾ (75 ರನ್)‌ ಅವರ ಅರ್ಧಶತಕದ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 167 ರನ್‌ಗಳನ್ನು ಕಲೆ ಹಾಕಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!