ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲ್ಯಾಂಡ್ ವಿರುದ್ದದ ಐದನೇ ಟಿ20 ಪಂದ್ಯದಲ್ಲಿ ಸೂರ್ಯ ಪಡೆ ಗೆದ್ದು ಸಂಭ್ರಮಿಸಿದೆ.
ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಐದನೇ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಗೆಲುವು ಸಾಧಿಸಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಇಶಾನ್ ಕಿಶನ್ ಅವರ ಭರ್ಜರಿ ಶತಕದ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು.
272 ರನ್ಗಳ ಗುರಿ ಬೆನ್ನಟ್ಟಿದ ಕಿವೀಸ್ ಪಡೆ 20 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 225ಕ್ಕೆ ಆಲೌಟ್ ಆಗುವ ಮೂಲಕ ಸೋಲು ಕಂಡಿತು.
ಈ ಗೆಲುವಿನೊಂದಿಗೆ ಭಾರತ ತಂಡ 5 ಪಂದ್ಯಗಳ ಸರಣಿಯನ್ನ 4-1ರಲ್ಲಿ ವಶಪಡಿಸಿಕೊಂಡಿತು.



