ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ವಿಷಯವಾಗಿ ಸಂಸತ್ತಿನಲ್ಲಿ ಎದ್ದಿದ್ದ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಇಂದು ಅಂಕಿ-ಅಂಶಗಳ ಸಮೇತ ಉತ್ತರ ನೀಡಿದ್ದಾರೆ. ಭಾರತದ ಕೃಷಿ ಮತ್ತು ಡೈರಿ ಅಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಯಾವುದೇ ಕಾರಣಕ್ಕೂ ಬಲಿಕೊಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಅಮೆರಿಕದ ಕೃಷಿ ಉತ್ಪನ್ನಗಳು ಭಾರತದ ಮಾರುಕಟ್ಟೆಯನ್ನು ಸುಲಭವಾಗಿ ಪ್ರವೇಶಿಸಲಿವೆ” ಎಂದು ನೀಡಿದ್ದ ಹೇಳಿಕೆ ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದವು.
ಒಪ್ಪಂದದ ಅಡಿಯಲ್ಲಿ ಭಾರತದ ಮೇಲೆ ಅಮೆರಿಕ ವಿಧಿಸಿದ್ದ 50% ಸುಂಕವನ್ನು ಈಗ 18% ಕ್ಕೆ ಇಳಿಸಲಾಗಿದೆ. ಇದು ಇತರ ಪ್ರತಿಸ್ಪರ್ಧಿ ದೇಶಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆಯಾಗಿದೆ.
ಈ ನಿರ್ಧಾರದಿಂದ ಭಾರತದ ಕಾರ್ಮಿಕ-ತೀವ್ರ ವಲಯಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ದೊಡ್ಡ ಅವಕಾಶಗಳು ಸಿಗಲಿವೆ. ಇದು ದೇಶದ ರಫ್ತು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಿದೆ.
ಇದನ್ನೂ ಓದಿ:
ಈ ವ್ಯಾಪಾರ ಒಪ್ಪಂದವು ಕೇವಲ ಆಮದು-ರಫ್ತಿಗೆ ಸೀಮಿತವಾಗಿಲ್ಲ; ಇದು ‘ವಿಕ್ಷಿತ್ ಭಾರತ್’ ಮತ್ತು ‘ಆತ್ಮನಿರ್ಭರ್ ಭಾರತ್’ ಅಭಿಯಾನಕ್ಕೆ ಶಕ್ತಿ ತುಂಬಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟಾರೆಯಾಗಿ, ಭಾರತದ ರೈತರ ಮತ್ತು ಉತ್ಪಾದಕರ ಹಿತವನ್ನು ರಕ್ಷಿಸಿಯೇ ಅಮೆರಿಕದೊಂದಿಗೆ ವ್ಯಾಪಾರ ಮಾತುಕತೆ ನಡೆಸಲಾಗಿದೆ ಎಂದು ಸರ್ಕಾರ ಸದನಕ್ಕೆ ಖಾತರಿ ನೀಡಿದೆ.



