Sunday, January 11, 2026

ಬಾಂಗ್ಲಾದೇಶ ಪ್ರವಾಸದಿಂದ ಹಿಂದೆ ಸರಿದ ಭಾರತ? ಆರ್ಥಿಕ ಸಂಕಷ್ಟದಲ್ಲಿ BCB!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿನ ಅಸ್ಥಿರ ಪರಿಸ್ಥಿತಿ ಹಾಗೂ ಅಲ್ಲಿನ ಹಿಂಸಾಚಾರದ ಹಿನ್ನೆಲೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ಈ ವರ್ಷದ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಟೀಮ್ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು ಬಿಸಿಸಿಐ ತಾತ್ಕಾಲಿಕವಾಗಿ ಮುಂದೂಡಿದೆ ಎಂದು ವರದಿಯಾಗಿದೆ.

ವಾಸ್ತವವಾಗಿ ಈ ಪ್ರವಾಸವು 2025ರಲ್ಲೇ ನಡೆಯಬೇಕಿತ್ತು. ಆದರೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ ಮತ್ತು ರಾಜಕೀಯ ಅಸ್ಥಿರತೆಯಿಂದಾಗಿ ಅದನ್ನು ಮುಂದೂಡಲಾಗಿತ್ತು. ಈ ಪ್ರವಾಸದಲ್ಲಿ ಭಾರತ ತಂಡ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಯನ್ನು ಆಡಬೇಕಿತ್ತು. ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ಸರಣಿ ನಡೆಯಲಿದೆ ಎಂದು ಕ್ರಿಕ್‌ಬಝ್ ವರದಿ ಮಾಡಿತ್ತಾದರೂ, ಈಗಿನ ಪರಿಸ್ಥಿತಿ ನೋಡಿ ಬಿಸಿಸಿಐ ಮತ್ತೆ ಹಿಂದೆ ಸರಿದಿದೆ.

ಇದನ್ನೂ ಓದಿ: CINE | ಮತ್ತೆ ಪ್ರತಿಧ್ವನಿಸಿದ ‘ಸಂದೇಶೇ ಆತೇ ಹೈ’ ಹಾಡು: ಬಾರ್ಡರ್–2 ಸಾಂಗ್ ಗೆ ದಾಖಲೆ ಮಟ್ಟದ ಪ್ರತಿಕ್ರಿಯೆ

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಗಳು ಭಾರತೀಯರಲ್ಲಿ ತೀವ್ರ ಆಕ್ರೋಶ ಮೂಡಿಸಿವೆ. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಈ ಸಮಯದಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಲ್ಲ ಎಂಬುದು ಮಂಡಳಿಯ ಅಭಿಪ್ರಾಯ.

ಭಾರತದ ಈ ನಿರ್ಧಾರದಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಆರ್ಥಿಕವಾಗಿ ಹೈರಾಣಾಗುವ ಸಾಧ್ಯತೆ ಇದೆ.

error: Content is protected !!