ಹೊಸದಿಗಂತ ಡಿಜಿಟಲ್ ಡೆಸ್ಕ್
ಶ್ರೀಲಂಕಾ ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬುಧವಾರ ಭಾರತೀಯ ಮಹಿಳಾ ಕ್ರಿಕೆಟ್ ಏಕದಿನ ಮತ್ತು ಟಿ 20 ಐ ತಂಡಗಳನ್ನು ಪ್ರಕಟಿಸಿದೆ.
ಮಿಥಾಲಿ ರಾಜ್ ನಿವೃತ್ತಿ ಘೋಷಿಸಿದ ನಂತರ ಹರ್ಮನ್ಪ್ರೀತ್ ಕೌರ್ ಅವರನ್ನು ಏಕದಿನ ತಂಡದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಹರ್ಮನ್ಪ್ರೀತ್ ಈಗಾಗಲೇ ಭಾರತದ ಟಿ 20 ಐ ನಾಯಕರಾಗಿದ್ದರು.
ಭಾರತ ಕ್ರಮವಾಗಿ ದಂಬುಲ್ಲಾ ಮತ್ತು ಕ್ಯಾಂಡಿಯಲ್ಲಿ ಮೂರು ಟಿ 20 ಮತ್ತು ಹಲವು ಏಕದಿನ ಪಂದ್ಯಗಳನ್ನು ಆಡಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ ಟಿ20 ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ವಿಸಿ), ಶಫಾಲಿ ವರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಮ್ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ಜೆಮಿಮಾ ರೊಡ್ರಿಗಸ್, ರಾಧಾ ಯಾದವ್.
ಭಾರತ ಏಕದಿನ ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ (ವಿಸಿ), ಶಫಾಲಿ ವರ್ಮಾ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್.