Tuesday, December 23, 2025

ಶ್ರೀಲಂಕಾ ವಿರುದ್ದದ ಎರಡನೇ ಟಿ20 ಮ್ಯಾಚ್ ಗೆದ್ದ ಭಾರತ ವನಿತೆಯರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ವಿರುದ್ದದ ಎರಡನೇ ಟಿ20 ಮ್ಯಾಚ್ ನಲ್ಲಿ ಭಾರತ ಮಹಿಳಾ ತಂಡ ಏಕಪಕ್ಷೀಯವಾಗಿ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 129 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ, ಯುವ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನು 49 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

129 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಮೊದಲ ವಿಕೆಟ್‌ಗೆ 3.1 ಓವರ್‌ಗಳಲ್ಲಿ 29 ರನ್‌ಗಳ ಜೊತೆಯಾಟ ನಡೆಸಿದರು. ಆದಾಗ್ಯೂ ಸ್ಮೃತಿ ಮಂಧಾನ ಸತತ 2ನೇ ಪಂದ್ಯದಲ್ಲಿ ವಿಫಲರಾಗಿ 14 ರನ್​ಗಳಿಗೆ ಔಟಾದರು. ಆದರೆ ಶೆಫಾಲಿ ವರ್ಮಾ ಒಂದು ತುದಿಯಿಂದ ತಮ್ಮ ಸ್ಫೋಟಕ ಬ್ಯಾಟಿಂಗ್ ಅನ್ನು ಮುಂದುವರಿಸಿ ಕೇವಲ 34 ಎಸೆತಗಳಲ್ಲಿ ಅಜೇಯ 69 ರನ್ ಬಾರಿಸಿದರು . ಜೆಮಿಮಾ ರೊಡ್ರಿಗಸ್ ಕೂಡ 15 ಎಸೆತಗಳಲ್ಲಿ 26 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಪರಿಣಾಮವಾಗಿ, ಟೀಂ ಇಂಡಿಯಾ ಕೇವಲ 11.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿ ಮುಟ್ಟಿತು.

error: Content is protected !!