Tuesday, August 16, 2022

Latest Posts

ಇಂಗ್ಲೆಂಡ್ ವಿರುದ್ಧ ಟಾಸ್​ ಗೆದ್ದ ಭಾರತ: ಬೌಲಿಂಗ್ ಆಯ್ಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಟಿ20 ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿ ಸೋಲು ಕಂಡಿದ್ದ ಟೀಮ್ ಇಂಡಿಯಾ ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಯುವ ಆಟಗಾರರಾದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯದಲ್ಲಿ ಅವಕಾಶ ನೀಡಿದೆ.
ಅಕ್ಷರ್ ಪಟೇಲ್ ಮತ್ತು ಶಿಖರ್ ಧವನ್​ ಬದಲಿಗೆ ಇವರಿಬ್ಬರು ಆಡಲಿದ್ದಾರೆ.
ಭಾರತ : ಇಶಾನ್ ಕಿಶನ್, ಕೆ.ಎಲ್. ರಾಹುಲ್,ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್
ಇಂಗ್ಲೆಂಡ್: ಇಯಾನ್ ಮಾರ್ಗನ್ (ನಾಯಕ), ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಆದಿಲ್ ರಶೀದ್, ಕ್ರಿಸ್ ಜೋರ್ಡಾನ್,ಟಾಮ್ ಕರ್ರನ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಜಾನಿ ಬೈರ್‌ಸ್ಟೋವ್, ಜೋಫ್ರಾ ಆರ್ಚರ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss