ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಭೇರಿ ಬಾರಿಸಿದೆ.
ಇಂದು ಎರಡನೇ ಪಂದ್ಯ ನಡೆಯುತ್ತಿದ್ದು, ಇದರಲ್ಲೂ ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ರಾಯ್‌ಪುರದ ಶಹೀದ್ ವೀರ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮೊದಲ ಪಂದ್ಯದಲ್ಲೇ ದ್ವಿಶತಕ ಸಿಡಿಸಿದ ಶುಭಮನ್ ಗಿಲ್ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು, ಉತ್ತರ ಪ್ರದರ್ಶನ ನೀಡುವ ನಿರೀಕ್ಷೆ ಇದೆ. ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು, ಈ ಪಂದ್ಯ ಗೆದ್ದು ಸಮಬಲಕ್ಕೆ ಬರುವ ನಿರೀಕ್ಷೆ ಇದೆ.