Sunday, December 10, 2023

Latest Posts

ICC WOLRD CUP| ಸೆಮಿಫೈಲ್‌ನಲ್ಲಿ ಟಾಸ್‌ ಗೆದ್ದ ಭಾರತ, ಬ್ಯಾಟಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಅಖಾಡಕ್ಕಿಳಿದಿವೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಪಡೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತಿಮ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೋಹಿತ್ ಹೇಳಿದ್ದಾರೆ. ಮತ್ತೊಂದೆಡೆ ಕಿವೀಸ್‌ನಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ.

ಅಜೇಯ ದಾಖಲೆಯೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ 9 ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ, ಸೆಮಿಸ್ ನಲ್ಲೂ ಅದೇ ವೇಗವನ್ನು ಮುಂದುವರಿಸಿ 2019ರ ಸೋಲಿಗೆ ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ತೀರ್ಮಾನಿಸಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ಸೆಮಿಸ್ ಗೆದ್ದು ಏಕದಿನ ವಿಶ್ವಕಪ್‌ಗೆ ಹತ್ತಿರವಾಗುವ ನಿರೀಕ್ಷೆಯಲ್ಲಿದೆ.

ಅಖಾಡಕ್ಕಿಳಿಯುವ ಆಟಗಾರರು

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡ್ಯಾರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!