ASIAN GAMES 2023| ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಒಲಿದ ಎರಡು ಕಂಚಿನ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಮಹಿಳಾ ಮತ್ತು ಪುರುಷರ ಸ್ಕೇಟಿಂಗ್ ತಂಡವು ಭರ್ಜರಿ ಪ್ರದರ್ಶನ ನೀಡುವ ಮೂಲಕ ಕಂಚಿನ ಪದಕ ಗೆದ್ದಿದೆ.

ಭಾರತದ ಪುರುಷರ ತಂಡವು ಸ್ಪೀಡ್ ಸ್ಕೇಟಿಂಗ್ 3000ಮೀ. ರಿಲೇಯಲ್ಲಿ ಕಂಚು ಪಡೆದುಕೊಂಡಿದೆ. ಮಹಿಳಾ ರೋಲರ್ ಸ್ಕೇಟಿಂಗ್ ತಂಡವು 3000 ಮೀಟರ್ ಸ್ಪೀಡ್ ಸ್ಕೇಟಿಂಗ್ ರಿಲೇಯಲ್ಲಿ ಕಂಚಿನ ಪದಕ ಪಡೆದುಕೊಂಡಿದೆ.

ಏಷ್ಯನ್‌ ಗೇಮ್ಸ್‌ನಲ್ಲಿ ಈವರೆಗೆ ಭಾರತ 13 ಚಿನ್ನ , 21 ಬೆಳ್ಳಿ ಹಾಗೂ 19 ಕಂಚಿನ ಪದಕಗಳೊಂದಿಗೆ ಒಟ್ಟು 53 ಪದಕಗಳನ್ನು ಬಾಚಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!