CINE | ಮೊದಲ ದಿನವೇ ನೆಲಕಚ್ಚಿದ INDIAN 2, ಫ್ಯಾನ್ಸ್‌ಗೆ ಭಾರೀ ನಿರಾಸೆ

ಹೊಸದಿಗಂತ ಡಿಜಿಡಲ್‌ ಡೆಸ್ಕ್‌: 

28 ವರ್ಷಗಳ ಬಳಿಕ ಇಂಡಿಯನ್‌ 2  ಸೀಕ್ವೆಲ್ ರಿಲೀಸ್ ಆಗಿದೆ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ಈ ಚಿತ್ರವನ್ನು ನೋಡಲು ಹೋದ ಫ್ಯಾನ್ಸ್​ಗೆ ಸಿಕ್ಕಿದ್ದು ಕೇವಲ ನಿರಾಸೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಶಂಕರ್ ಅವರು ಒಂದೊಳ್ಳೆಯ ಅವಕಾಶವನ್ನು ತಪ್ಪಿಸಿಕೊಂಡರು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಜನರ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿ ಬಂದಿಲ್ಲ. ಈ ಬಗ್ಗೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಹೀಗಾಗಿ, ಅವರು ಕೂಡ ಸಿನಿಮಾನ ಉಳಿಸೋಕೆ ಸಾಧ್ಯವಿಲ್ಲ ಎಂಬುದು ಸಿನಿಪ್ರಿಯರ ಅಭಿಪ್ರಾಯ. ಅವರ ಸಿನಿಮಾಗೆ ಗಟ್ಟಿತನ ಇಲ್ಲ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!