ಅಮೆರಿಕದ ದೇಶೀಯ ನೀತಿ ಸಲಹೆಗಾರರಾಗಿ ಭಾರತೀಯ ಮೂಲದ ನೀರಾ ಟಂಡೆನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ರಾಯಭಾರಿ ಸುಸಾನ್ ರೈಸ್ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಹಿನ್ನೆಲೆ ಅಧ್ಯಕ್ಷರ ಸಹಾಯಕ ಮತ್ತು ದೇಶೀಯ ನೀತಿ ಸಲಹೆಗಾರರಾಗಿ ಭಾರತೀಯ – ಅಮೆರಿಕನ್ ಮೂಲದ ನೀರಾ ಟಂಡೆನ್ ಅವರನ್ನು ಯುಎಸ್ ಅಧ್ಯಕ್ಷ ಜೋ ಬೈಡನ್ ಆಯ್ಕೆ ಮಾಡಿದ್ದಾರೆ.

ಪ್ರಸ್ತುತ ಅಧ್ಯಕ್ಷ ಬೈಡನ್ ಮತ್ತು ಸಿಬ್ಬಂದಿ ಕಾರ್ಯದರ್ಶಿಯ ಹಿರಿಯ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಟಂಡೆನ್ ಅವರು, ಶ್ವೇತಭವನದ ಮೂರು ಪ್ರಮುಖ ನೀತಿ ಮಂಡಳಿಗಳನ್ನು ಮುನ್ನಡೆಸಿದ ಮೊದಲ ಏಷಿಯನ್​ – ಅಮೆರಿಕನ್ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.

ಟಂಡೆನ್, ಈ ಹಿಂದೆ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆಯಲ್ಲಿ ಹಿರಿಯ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಶ್ವೇತಭವನದಲ್ಲಿ ಅಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರ ಆರೋಗ್ಯ ಸುಧಾರಣಾ ತಂಡದಲ್ಲಿ ಸಹ ಕೆಲಸ ಮಾಡಿದ್ದಾರೆ. ಅದಕ್ಕೂ ಮೊದಲು, ಒಬಾಮಾ – ಬೈಡನ್ ಅಧ್ಯಕ್ಷೀಯ ಪ್ರಚಾರಕ್ಕಾಗಿ ದೇಶೀಯ ನೀತಿಯ ನಿರ್ದೇಶಕರಾಗಿದ್ದರು ಮತ್ತು ಹಿಲರಿ ಕ್ಲಿಂಟನ್ ಅಧ್ಯಕ್ಷೀಯ ಪ್ರಚಾರಕ್ಕಾಗಿ ನೀತಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.

“ನೀರಾ ಟಂಡೆನ್ ಅವರು ದೇಶೀಯ, ಆರ್ಥಿಕ ಮತ್ತು ರಾಷ್ಟ್ರೀಯ ಭದ್ರತಾ ತಂಡಗಳ ಹಿರಿಯ ಸಲಹೆಗಾರರಾಗಿ ಮತ್ತು ಸಿಬ್ಬಂದಿ ಕಾರ್ಯದರ್ಶಿಯಾಗಿ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳಲ್ಲಿ ಭಾಗಿಯಾಗಲಿದ್ದಾರೆ. ಅವರು ಸಾರ್ವಜನಿಕ ನೀತಿಯಲ್ಲಿ 25 ವರ್ಷಗಳ ಅನುಭವ ಹೊಂದಿದ್ದು, ಮೂವರು ಅಧ್ಯಕ್ಷರೊಂದಿಗೆ ಕೆಲಸ ನಿರ್ವಹಿಸಿದ್ದಾರೆ. ಸುಮಾರು ಒಂದು ದಶಕದಿಂದ ದೇಶದ ಅತಿದೊಡ್ಡ ಥಿಂಕ್ ಟ್ಯಾಂಕ್‌ಗಳಲ್ಲಿ ಒಂದನ್ನು ಮುನ್ನಡೆಸಿದ್ದಾರೆ” ಎಂದು ವೈಟ್ ಹೌಸ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!