Thursday, March 23, 2023

Latest Posts

BIG| ಪತನಗೊಂಡ ಸೇನಾ ಹೆಲಿಕಾಪ್ಟರ್: ಪೈಲಟ್, ಸಹ ಪೈಲಟ್‌ಗಾಗಿ ಶೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅರುಣಾಚಲ ಪ್ರದೇಶದ ದಿರಾಂಗ್ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಮಂಡಲ್ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್ ಮತ್ತು ಸಹ ಪೈಲಟ್ ಇದ್ದಾರೆ. ಗುರುವಾರ ಬೆಳಿಗ್ಗೆ 9.15 ರ ಸುಮಾರಿಗೆ ಹೆಲಿಕಾಪ್ಟರ್‌ಗೆ ಏರ್ ಟ್ರಾಫಿಕ್ ಕಂಟ್ರೋಲ್ (ATC) ಯೊಂದಿಗೆ ಸಂಬಂಧ ಕಡಿದುಕೊಳ್ಳಲಾಗಿದೆ ಎಂದು ಗುವಾಹಟಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಖಚಿತಪಡಿಸಿದ್ದಾರೆ.

ಸಿಂಗೆಯಿಂದ ಮಿಸಾಮರಿ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಪೈಲಟ್ ಮತ್ತು ಸಹ ಪೈಲಟ್‌ಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಸಿಂಘಿಂಗ್ ಪ್ರದೇಶದಲ್ಲಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿತ್ತು. ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿದ್ದರು. ಮೃತರಲ್ಲಿ ಇಬ್ಬರು ಪೈಲಟ್‌ಗಳೂ ಸೇರಿದ್ದಾರೆ. ಅಪಘಾತಕ್ಕೀಡಾದ ಆಧುನಿಕ ಲಘು ಹೆಲಿಕಾಪ್ಟರ್ ಎಚ್‌ಎಎಲ್ ರುದ್ರ. ಅಂದು ಬೆಳಗ್ಗೆ ಟ್ಯೂಟಿಂಗ್ ಪ್ರಧಾನ ಕಛೇರಿಯಿಂದ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!