ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ.
ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಸೋಮವಾರ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ಬಳಿಯ ನಿಯಂತ್ರಣ ರೇಖೆಯಲ್ಲಿ (LOC) ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 5:30ರ ಸುಮಾರಿಗೆ ಬಾಲಕೋಟ್‌ನ ವೈಟ್ ನೈಟ್ ಕಾರ್ಪ್ಸ್ ಪಡೆಗಳು ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನೆಯನ್ನು ಗಮನಿಸಿದರು. ತಕ್ಷಣವೇ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಎರಡು ಕಡೆಯಿಂದಲೂ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.