ಜಮ್ಮ- ಕಾಶ್ಮೀರದಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆದಿದ್ದು, ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
ಕಲ್ಬಿಲ್ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆ ಆ ಪ್ರದೇಶದಲ್ಲಿ ತಪಾಸಣೆ ಕಾರ್ಯಾಚರಣೆ ನಡೆಯಿತು.ಈ ವೇಳೆ ಅಲ್ಲಿ ಉಗ್ರರು ಇರುವುದು ತಿಳಿದು ಕಾರ್ಯಾಚರಣೆ ನಡೆಸಿದ್ದು, ಉಗ್ರರು ಸೇನೆಯ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆಯ ಹಿನ್ನೆಲೆಯಲ್ಲಿ ಶ್ರೀನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಈಗಾಗಲೇ ಹೆಚ್ಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!