ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ 10ನೇ ಬಾರಿ ಎಲ್‌ಒಸಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು. ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.
ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಹಲವಾರು ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಎದುರು ಪ್ರದೇಶಗಳಲ್ಲಿ ಎಲ್‌ಒಸಿಯಾದ್ಯಂತ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವುದಾಗಿ ವರದಿಯಾಗಿದೆ.