ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾರಾಮುಲ್ಲಾದಲ್ಲಿ ಗಡಿ ನುಸುಳಿ ಬಂದಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಬಲಿ ತೆಗೆದುಕೊಂಡಿದೆ.
ಉಗ್ರ ನಿಗ್ರಹ ಕಾರ್ಯಾಚರಣೆಯ ವೇಳೆ ಭದ್ರತಾ ಸಿಬ್ಬಂದಿ ಇಬ್ಬರು ರಕ್ತಪಿಪಾಸುಗಳನ್ನು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನ ಗಡಿಯಿಂದ ಒಳನುಸುಳಿ ಬರುತ್ತಿದ್ದ ವೇಳೆ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು. ಭಯೋತ್ಪಾದಕರ ಒಳನುಸುಳುವಿಕೆಯನ್ನು ಸೇನಾ ಪಡೆಯು ತಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಭಯೋತ್ಪಾದಕರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ತಿಳಿಸಿದೆ.