ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಜೈಪುರಕ್ಕೆ ತೆರಳುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ವಾಗಿದೆ.
ಚೇತಕ್ ಹೆಲಿಕಾಪ್ಟರ್ ನ ಎಂಜಿನ್ ಚಿಪ್ ವಾರ್ನಿಂಗ್ ಲೈಟ್ ಶುಕ್ರವಾರ ಆನ್ ಆದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಹೊಲಗಳಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ರಾಜಧಾನಿ ಜೈಪುರದಿಂದ 100 ಕಿ.ಮೀ ದೂರದಲ್ಲಿರುವ ದಿದ್ವಾನಾದಲ್ಲಿ ಸೇನೆಯ ಹೆಲಿಕಾಪ್ಟರ್ ಹೊಲಗಳಲ್ಲಿ ಇಳಿಯಿತು ಎಂದು ಸೇನಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಘಟನೆಯ ಸಮಯದಲ್ಲಿ ಹೆಲಿಕಾಪ್ಟರ್ ನಲ್ಲಿ ಯಾವುದೇ ವಿಐಪಿಗಳು ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.