ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ ಎಂದ ರಾಹುಲ್ ಗಾಂಧಿಗೆ ಭಾರತೀಯ ಸೇನೆ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಗ್ನಿಪಥ್‌ ಯೋಜನೆ ಕುರಿತು ಆರೋಪಗಳನ್ನು ಮಾಡಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು ನೀಡಿದೆ.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯ ವೇಳೆ ‘ಅಗ್ನಿವೀರರು ಯೂಸ್‌ ಅಂಡ್‌ ಥ್ರೋ ಕಾರ್ಮಿಕರಿದ್ದಂತೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟು, ಹುತಾತ್ಮ ಯೋಧರಿಗೆ ಕಿಂಚಿತ್ತೂ ಪರಿಹಾರ ನೀಡಿಲ್ಲ ಎಂದು ರಾಹುಲ್‌ ಕಿಡಿ ಕಾರಿದ್ದರು. ಇದಕ್ಕೆ ಉತ್ತರ ನೀಡಿರುವ ಭಾರತೀಯ ಸೇನೆ(Indian Army), ಕರ್ತವ್ಯದಲ್ಲಿದ್ದಾಗ ನಿಧನರಾದ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರವಾಗಿ 98 ಲಕ್ಷ ರೂ ನೀಡಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

ರಾಹುಲ್‌ ಗಾಂಧಿ ಆರೋಪಕ್ಕೆ ಸೇನೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡುವ ಮೂಲಕ ತಿರುಗೇಟು ಕೊಟ್ಟ ಭಾರತೀಯ ಸೇನೆ, ಕರ್ತವ್ಯದಲ್ಲಿರುವಾಗ ಮೃತಪಟ್ಟ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹೇಳಿವೆ. ಒಟ್ಟಾರೆ ಮೊತ್ತದಲ್ಲಿ ಅಗ್ನಿವೀರ್ ಅಜಯ ಅವರ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ ನೀಡಲಾಗಿದೆ. ಅಗ್ನಿವೀರ್ ಯೋಜನೆಯ ನಿಯಮಗಳ ಅಡಿಯಲ್ಲಿ ಅನ್ವಯವಾಗುವಂತೆ ಅನುಗ್ರಹ ಪೂರ್ವಕವಾಗಿ ನೀಡಲಾಗುವ ಪರಿಹಾರ (ಎಕ್ಸ್‌- ಗ್ರೇಷಿಯಾ) ಮತ್ತು ಇತರೆ ಪ್ರಯೋಜನಗಳ ಅಂದಾಜು 67 ಲಕ್ಷ ರೂ ಮೊತ್ತವನ್ನು ಬಾಕಿ ಇರುವ ಪೊಲೀಸ್ ಪರಿಶೀಲನೆ ಬಳಿಕ ಕೂಡಲೇ ಅಂತಿಮ ಸೆಟ್ಲ್‌ಮೆಂಟ್ ಆಗಿ ಅವರ ಖಾತೆಗೆ ಜಮಾವಣೆ ಮಾಡಲಾಗುವುದು. ಒಟ್ಟಾರೆ ಮೊತ್ತವು ಅಂದಾಜು 1.65 ಕೋಟಿ ರೂ,ನಷ್ಟು ಹಣ ಅವರಿಗೆ ಸಿಗಲಿದೆ ಎಂದು ಸೇನೆ ತಿಳಿಸಿದೆ.

https://x.com/adgpi/status/1808541708248101276?ref_src=twsrc%5Etfw%7Ctwcamp%5Etweetembed%7Ctwterm%5E1808541708248101276%7Ctwgr%5Ecb3b00c3a074f29d59a6717367a19eb3920992bb%7Ctwcon%5Es1_&ref_url=https%3A%2F%2Fvistaranews.com%2Fnational%2Fagnipath-scheme-agniveers-family-was-paid-98-lakh-army-after-rahul-gandhis-claim%2F687548.html

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!